ಸರಳವಾಗಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ಸರ್ಕಾರವು 5 ಗ್ಯಾರಂಟಿಗಳಲ್ಲಿ ಒಂದಾದ ನಿರುದ್ಯೋಗಿ ಪದವೀಧರರಿಗೆ, ಡಿಪ್ಲೊಮ ಪಾಸಾದ ನಿರುದ್ಯೋಗಿಗಳಿಗೆ ನೀಡುವುದಾಗಿ ಘೋಷಣೆ ಮಾಡಿದ್ದ ಯುವನಿಧಿ ಯೋಜನೆ ಜಾರಿಗೆ ಸಕಲ ಸಿದ್ಧತೆ ನಡೆಸಿದೆ. ಅದರ ಭಾಗವಾಗಿ ಇಂದಿನಿಂದ (ಡಿಸೆಂಬರ್ 26) ನಿರುದ್ಯೋಗಿಗಳಿಂದ ಅರ್ಜಿ ಸ್ವೀಕಾರವನ್ನು ಮಾಡಲಿದೆ. ಆಸಕ್ತರು ಈ ಕುರಿತು ಹೆಚ್ಚಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ಯುವನಿಧಿ ಯೋಜನೆಗೆ ಅರ್ಜಿ ಹಾಕಲು ಅರ್ಹತೆ
2023 ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ಪದವಿ / ಡಿಪ್ಲೊಮ ಪಾಸ್ ಮಾಡಿದ್ದು, ಉತ್ತೀರ್ಣರಾದ ದಿನಾಂಕದಿಂದ 180 ದಿನ ಕಳೆದರೂ ಉದ್ಯೋಗ ಪಡೆಯದವರು ಮಾತ್ರ ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಉತ್ತೀರ್ಣರಾದ ದಿನಾಂಕದಿಂದ 6 ತಿಂಗಳ ವರೆಗೆ ತಮ್ಮ ಅಧಿಕೃತ ಬ್ಯಾಂಕ್ ಖಾತೆಗಳ ವಹಿವಾಟು ಸ್ಟೇಟ್‌ಮೆಂಟ್ ಪ್ರತಿ ಕಡ್ಡಾಯವಾಗಿ ಸಲ್ಲಿಸಬೇಕಾಗಿರುತ್ತದೆ.
ಉನ್ನತ ಶಿಕ್ಷಣಕ್ಕಾಗಿ ಪ್ರವೇಶ ಪಡೆದು ಅಧ್ಯಯನ ಮಾಡುತ್ತಿರುವವರು, ಅಪ್ರೆಂಟಿಸ್ ಹುದ್ದೆಗಳಿಗೆ ಸೇರಿದವರು, ಯಾವುದೇ ಕ್ಷೇತ್ರದಲ್ಲಿ ಉದ್ಯೋಗ ಪಡೆದವರು ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಆಧಾರ್ ಕಾರ್ಡ್
- ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ
- ಪಿಯುಸಿ ಅಂಕಪಟ್ಟಿ
- ಡಿಗ್ರಿ / ಡಿಪ್ಲೊಮಾ ಅಂಕಪಟ್ಟಿ
- ಬ್ಯಾಂಕ್ ಖಾತೆ ಪಾಸ್ ಬುಕ್ ಪ್ರತಿ
- ಪದವಿ / ವೃತ್ತಿಪರ ಕೋರ್ಸ್ ಪಡೆದ ಪ್ರಮಾಣ ಪತ್ರ
- ಕೋರ್ಸ್ ಮುಗಿದು 6 ತಿಂಗಳಾದರು ಉದ್ಯೋಗ ಪಡೆಯದ ಕುರಿತು ಸ್ವಯಂ ದೃಢೀಕೃತ ಪ್ರಮಾಣ ಪತ್ರ ಅಥವಾ ನೋಟರಿ.
ಯುವನಿಧಿಗೆ ಆರ್ಜಿ ಸಲ್ಲಿಸುವ ವಿಧಾನ
ಯುವನಿಧಿಗೆ ಆರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ
ನಂತರ user ID ಎಂಬ ಜಾಗದಲ್ಲಿ ನಿಮ್ಮ ಮೊಬೈಲ್ ನಂಬರ್ ಎಂಟರ್ ಮಾಡಿ get OTP ಎಂಬ ಬಟನ್ ಕ್ಲಿಕ್ ಮಾಡಿ.
Post a Comment
0Comments